Live Stream

November 2022
W T F S S M T
 1
2345678
9101112131415
16171819202122
23242526272829
30  

| Latest Version 8.2.9 |

National News

ಅತ್ಯಾಚಾರಿಗಳು, ನರಮೇಧ ನಡೆಸಿದವರ ಬಿಡುಗಡೆ ಸಮರ್ಥಿಸಿಕೊಂಡ ಕೇಂದ್ರ ಸಚಿವ ಪ್ರಹ್ಲಾದ ಜೋಶಿ


ಹೊಸದಿಲ್ಲಿ: 2002ರ ಗುಜರಾತ್ ದಂಗೆಯಲ್ಲಿ ಬಿಲ್ಕಿಸ್ ಬಾನೋ ಮತ್ತು ಅವರ ಕುಟುಂಬದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿ, ಚಿಕ್ಕ ಮಕ್ಕಳು ಸೇರಿದಂತೆ 14 ಜನರನ್ನು ಬರ್ಬರ ಹತ್ಯೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿದ್ದ 11 ಮಂದಿಯನ್ನು ಬಿಡುಗಡೆ ಮಾಡಿದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರ ಮತ್ತು ಸಂಬಂಧಪಟ್ಟ ಜನರು ಈ ನಿರ್ಧಾರವನ್ನು ತೆಗೆದುಕೊಂಡಾಗ, ಇದು ಕಾನೂನಿನ ಪ್ರಕ್ರಿಯೆಯಾಗಿರುವುದರಿಂದ ಅದರಲ್ಲಿ ನನಗೆ ಯಾವುದೇ ತಪ್ಪಿಲ್ಲ ಅಂತ ಕಾಣಿಸಿಕೊಳ್ಳುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಎನ್ ಡಿ ಟಿವಿಗೆ ಜೊತೆಗಿನ ಸಂದರ್ಶನದಲ್ಲಿ ಹೇಳಿದ್ದಾರೆ.

ಇದೇ ವೇಳೆ ಅವರ ಜೈಲಿನಲ್ಲಿ ಸಾಕಷ್ಟು ಸಮಯ ಕಳೆದ ಅಪರಾಧಿಗಳಿಗೆ ಬಿಡುಗಡೆಗೆ ಅವಕಾಶವಿದೆ ಎಂದು ಹೇಳಿದ್ದಾರೆ.

ಈ ನಡುವೆ ಸನ್ನಡತೆಗಾಗಿ ಕೈದಿಗಳನ್ನು ಬಿಡುಗಡೆ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಇದನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ನಾನು ನಂಬುತ್ತೇನೆ. ಖಂಡಿತವಾಗಿಯೂ, ಯಾವುದೇ ಅಪರಾಧಿಯು ಅವರ ಕೃತ್ಯಗಳಿಗಾಗಿ ಶಿಕ್ಷೆಗೆ ಅರ್ಹನಾಗಿದ್ದಾನೆ ಎಂದು ಹಾರ್ದಿಕ ಪಟೇಲ ಹೇಳಿದ್ದಾರೆ.


A B Dharwadkar
the authorA B Dharwadkar

Leave a Reply