ಬೆಳಗಾವಿ, 14: ಬೆಳಗಾವಿ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯ ವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ವಂದೇ ಭಾರತ ಎಕ್ಸ್ಪ್ರೆಸ್ ರೈಲು ಸಂಖ್ಯೆ (20661) ಬೆಳಿಗ್ಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ (20662) ಮಧ್ಯಾಹ್ನ 02.00 ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 10.10 ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ.
ಶ್ರೀಘ್ರದಲ್ಲಿ ವಂದೇ ಭಾರತ ಎಕ್ಸ್ಪ್ರೆಸ್ ರೈಲು ಸಂಚಾರದ ದಿನಾಂಕ ನಿಗದಿಯಾಗಲಿದೆ. ನನ್ನ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಹಾಗೂ ರೈಲ್ವೆ ಇಲಾಖೆಗೆ ಕಡಾಡಿ ಅವರು ಧನ್ಯವಾದ ಹೇಳಿದ್ದಾರೆ.