This is the title of the web page

ಧಾರವಾಡದಲ್ಲಿ ಹಿಂಸಾರೂಪಕ್ಕೆ ತಿರುಗಿದ ಅಗ್ನಿಪಥ ಯೋಜನೆ ವಿರೋಧಿ ಪ್ರತಿಭಟನೆ

 

ಧಾರವಾಡ, ೧೮- ಅಗ್ನಿಪಥ ಯೋಜನೆಗೆ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯದಲ್ಲಿಯೂ ಕೂಡ ಅಗ್ನಿಪಥ ಸೇನಾ ನೇಮಕಾತಿ ಯೋಜನೆಯ ವಿರುದ್ಧದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ.

ಧಾರವಾಡ ಕಲಾಭವನದ ಬಳಿ ಯುವಕರ ಗುಂಪಿನಿಂದ ಅಗ್ನಿಪಥ ಯೋಜನೆ ವಿರುದ್ಧ ಭಾರೀ ಪ್ರತಿಭಟನೆ ನಡೆದಿದ್ದು ಖಾಸಗಿ ಬಸ್‌ ಮೇಲೆ ಕಲ್ಲು ತೂರಾಟ ಮಾಡಿ ಯುವಕರಿಂದ ಆಕ್ರೋಶ ವ್ಯಕ್ತವಾಗಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಐವರು ಯುವಕರನ್ನು ಪೊಲೀಸರ ವಶಕ್ಕೆ ಪಡೆಯಲಾಗಿದೆ.

You might also like
Leave a comment