Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಸಿದ್ದರಾಮಯ್ಯ ಭ್ರಷ್ಟಾಚಾರದ ವಿವರ ರಾಹುಲ್ ಗೆ ಕಳಿಸುತ್ತೇನೆ -ಬೊಮ್ಮಾಯಿ


ಬೀದರ: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವಿರೋಧ ಪಕ್ಷ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಬೀದರ್ ನ ಔರಾದನಲ್ಲಿ ನಡೆದ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಬೊಮ್ಮಾಯಿ, ಬಿಜೆಪಿ ಸರ್ಕಾರದಲ್ಲಿ ಹಣ ಕೊಟ್ಟರೆ ಮಾತ್ರ ಕೆಲಸ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದರು. ಕಾಂಗ್ರೆಸ್ ಸರ್ಕಾರದ ಅವಧಿಯ ಎಲ್ಲಾ ಹಗರಣಗಳ ಬಗ್ಗೆ ದಾಖಲೆ ಸಮೇತ ರಾಹುಲ್ ಗಾಂಧಿಗೆ ಕಳುಹಿಸುವುದಾಗಿ ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರ್ಜಿ ಕರೆಯದೇಯೇ ಕೆಲಸ ಕೊಡಲಾಗುತ್ತಿತ್ತು. ಸಿದ್ದರಾಮಯ್ಯನವರ ಆಡಳಿತದಲ್ಲಿ ಏನೆಲ್ಲ ಭ್ರಷ್ಟಾಚಾರಗಳು ನಡೆದಿವೆ ಎಂಬ ಬಗ್ಗೆ ದಾಖಲೆಗಳ ಸಮೇತ ರಾಹುಲ್ ಗಾಂಧಿಯವರಿಗೆ ಕಳುಹಿಸಿ ಕೊಡುತ್ತೇನೆ ಎಂದು ಹೇಳಿದರು.


Leave a Reply