ಹೊಸದಿಲ್ಲಿ: ಡಿಸೆಂಬರ್ 7ರಿಂದ ಡಿಸೆಂಬರ್ 29 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಒಟ್ಟು 23 ದಿನಗಳ ಅವಧಿಯಲ್ಲಿ 17 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳು ಮತ್ತು ರಚನಾತ್ಮಕ ಚರ್ಚೆಗಾಗಿ ಎದುರು ನೋಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.
ರಾಜ್ಯಸಭೆಯ ಅಧ್ಯಕ್ಷರಾಗಿರುವ ಉಪ ರಾಷ್ಟ್ರಪತಿ ಜಗದೀಪ ಧನಕರ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಅಧಿವೇಶನ ಇದಾಗಿದೆ. ಮುಂಬರುವ ಅಧಿವೇಶನದಲ್ಲಿ ಅಂಗೀಕರಿಸಬೇಕಾದ ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧ ಪಡಿಸುತ್ತಿದೆ.