ಸವದತ್ತಿ: ನಿರಂತರ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ.
55 ವರ್ಷದ ಗಂಗವ್ವ ರಾಮಣ್ಣ ಮೂಲಿಮನಿ ಮೃತ ಮಹಿಳೆ. ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮನೆ ತೇವಗೊಂಡು ಏಕಾಏಕಿ ಕುಸಿದು ಬಿದ್ದಿದೆ.
ಮನೆಯಲ್ಲಿದ್ದ ಮಹಿಳೆ ಗಂಗವ್ವ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ನಪ್ಪಿದ್ದಾರೆ.