Please assign a menu to the primary menu location under menu

State

ಸುಪ್ರೀಮ ಕೋರ್ಟ ಮೆಟ್ಟಿಲೇರಿದ ಯಡಿಯೂರಪ್ಪ 

bsy and son

ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲವು ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸುಪ್ರೀಮ ಕೋರ್ಟ‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಭ್ರಷ್ಟಾಚಾರ ಆರೋಪ ಮಾಡಿ ಯಡಿಯೂರಪ್ಪನವರ ವಿರುದ್ಧ ಟಿ. ಜೆ ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ರಾಜ್ಯಪಾಲರ ಪೂರ್ವಾನುಮತಿ ನೀಡಿದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ ಮೆಟ್ಟಿಲೇರಿದ್ದರು.

ಈ ದೂರನ್ನು ಮರು ಪರಿಶೀಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ ಸೂಚನೆ ನೀಡಿದ್ದು, ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿತ್ತು. ಈ ಬಗ್ಗೆ ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ, ಸಚಿವ ಎಸ್.ಟಿ. ಸೋಮಶೇಖರ ಸೇರಿದಂತೆ 9 ಮಂದಿಯ ವಿರುದ್ಧ ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಎಫ್‌ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ ನೀಡಿದ ಸೂಚನೆಯನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಮ ಕೋರ್ಟ ಮೆಟ್ಟಿಲೇರಿದ್ದು, ಸೋಮವಾರ ಸುಪ್ರೀಮ ಕೋರ್ಟ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠದ ಮುಂದೆ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ.


Samadarshi News

Leave a Reply