This is the title of the web page

ಮಂಗಳವಾರ ಸುವರ್ಣ ವಿಧಾನಸೌಧದಲ್ಲಿ ಯೋಗ ದಿನಾಚರಣೆ

 

 

ಬೆಳಗಾವಿ : ಆಯುಷ್ ಮಂತ್ರಾಲಯದ ಸೂಚನೆಯಂತೆ 2022 ರ ಘೋಷವಾಕ್ಯ “ಮಾನವೀಯತೆಗಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಆರೋಗ್ಯಯುತ ಜೀವನಕ್ಕಾಗಿ ಮಂಗಳವಾರ “8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ” 75 ಸಾಂಪ್ರದಾಯಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ ಹಾಗೂ ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಬೆಳಗಾವಿ ಜಿಲ್ಲೆಯಲ್ಲಿ 3 ಸ್ಥಳಗಳಾದ ಸುವರ್ಣ ವಿಧಾನಸೌಧ, ಚೆನ್ನಮ್ಮನ ಕಿತ್ತೂರು ಕೋಟೆ ಅವರಣ, ನಂದಗಡದ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಪುಣ್ಯಭೂಮಿಯಲ್ಲಿ ಮಂಗಳವಾರ, ಜೂ.21 ಬೆಳಿಗ್ಗೆ 6 ಗಂಟೆಗೆ ಯೋಗ ದಿನಾಚರಣೆ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಶಾಲಾ – ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಎಲ್ಲಾ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿ ವರ್ಗದವರು, ಸಂಘ ಸಂಸ್ಥೆಗಳು, ಪತಂಜಲಿ ಸಮಿತಿಯವರು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕೋವಿಡ್ ಮಾರ್ಗಸೂಚಿ ಪಾಲನೆ:
ಜೂನ್ -21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುವುದು ವಾಡಿಕೆಯಾಗಿದ್ದು, ಪ್ರಸ್ತುತ ಕೋವಿಡ್ -19 ಮಾರ್ಗಸೂಚಿ ಅನ್ವಯ ಸಾರ್ವಜನಿಕ ಸಮಾರಂಭಗಳನ್ನು ಆಯೋಜಿಸಿ ಈ ಸಾಲಿನ ಅಂತರಾಷ್ಟ್ರೀಯ ಯೋಗ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

You might also like
Leave a comment